ಮುಂಬೈ: ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಬಾಲಿವುಡ್ ನ ಹಿರಿಯ ನಟ ಧರ್ಮೇಂದ್ರ ನಿಧನರಾಗಿದ್ದಾರೆ. ಧರ್ಮೇಂದ್ರ ಅವರಿಗೆ 89 ವರ್ಷ ವಯಸ್ಸಾಗಿತ್ತು. ಧರ್ಮೇಂದ್ರ ಅವರು “ಹಿ-ಮ್ಯಾನ್” ಎಂದೇ ಖ್ಯಾತಿ ಪಡೆದಿದ್ದರು. ಧರ್ಮೇಂದ್ರ ಅವರು ದೀರ್ಘಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಮತ್ತು ಕೆಲವು ದಿನಗಳಿಂದ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಅವರನ್ನು ಮನೆಗೆ ಕರೆದೊಯ್ಯಲಾಯಿತು ಮತ್ತು ಮನೆಯಿಂದಲೇ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.











